ಫ್ಯಾಕ್ಟ್ ಚೆಕ್ | 10ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳು ರದ್ದು

ಫ್ಯಾಕ್ಟ್ ಚೆಕ್ | 10ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳು ರದ್ದು?

 

 

ಸತ್ಯ:

 

ಬೋರ್ಡ್ ಪರೀಕ್ಷೆ ರದ್ದತಿ ಕುರಿತು ಹರಿದಾಡುತ್ತಿರುವ ಸಂದೇಶ ಸುಳ್ಳು ಎಂದು ಪಿಐಬಿ ಫ್ಯಾಕ್ಟ್ ಚೆಕ್ ವೇದಿಕೆ ತಿಳಿಸಿದೆ. ಬೋರ್ಡ್ ಪರೀಕ್ಷೆ ರದ್ದುಗೊಳಿಸಿರುವ ಕುರಿತಂತೆ ಶಿಕ್ಷಣ ಇಲಾಖೆಯು ಸದ್ಯಕ್ಕೆ ಯಾವುದೇ ಆದೇಶ ಹೊರಡಿಸಿಲ್ಲ. ಎನ್‌ಇಪಿ ಅಡಿಯಲ್ಲಿ 10ನೇ ತರಗತಿ ಪರೀಕ್ಷೆ ಮುಂದುವರಿಯುವುದಿಲ್ಲ ಎಂಬ ಸುದ್ದಿಯಿಂದ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಬಾರದು ಎಂದು ತಿಳಿಸಿದೆ.

 

 

 

ಸುಳ್ಳು:

 

ಕೇಂದ್ರ ಸಚಿವ ಸಂಪುಟವು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದೆ. ‘ಈ ಶಿಕ್ಷಣ ನೀತಿಯ ಅನ್ವಯ, ಈ ಬಾರಿಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳು ಇರುವುದಿಲ್ಲ’ ಎಂಬ ಬರಹವುಳ್ಳ ಸಂದೇಶವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೇಂದ್ರ ಶಿಕ್ಷಣ ಸಚಿವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

 

 

 

Leave A Reply

Your email address will not be published.